MINISTER FOR ANIMAL HUSBANDRY AND SERICULTURE, GOVT. OF KARNATAKA | ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು, ಕರ್ನಾಟಕ ಸರ್ಕಾರ ।ಶಾಸಕರು ಚಾಮರಾಜನಗರ | MLA Chamarajanagar |

Chamarajanagar karnataka
Joined September 2017
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಟಿ. ರಘುಮೂರ್ತಿಯವರು ಚಾಮರಾಜನಗರ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಂದು ನನ್ನ ಸ್ವಗೃಹಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ವಿವಿಧ ವಿಷಯಗಳ ಕುರಿತು ಸೌಹಾರ್ದಯುತವಾಗಿ ಚರ್ಚೆ ನಡೆಸಿದೆವು.
3
88
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ, ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದೆ. ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಗಮನ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಲಭ್ಯತೆಯಿದೆ. ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಪರಿಹಾರ ಒದಗಿಸಲು ಪ್ರಕೃತಿ ವಿಕೋಪ ನಿಧಿಯಡಿ ಹಣ ಇದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಮುತುವರ್ಜಿಯಿಂದ ಜನರಿಗೆ ಅಗತ್ಯವಿರುವ ಕುಡಿಯುವ ನೀರನ್ನು ಪೂರೈಸಲು ಬದ್ದವಾಗಿದ್ದೇವೆ. ಜಾನುವಾರುಗಳ ಮೇವಿನ ಸಮಸ್ಯೆ ನೀಗಿಸಲು ಪಶುಪಾಲನಾ ಇಲಾಖೆ 25 ಕೋಟಿ ರೂ. ವೆಚ್ಚ ಮಾಡುತ್ತಿದೆ. ಈಗಾಗಲೇ ಮೇವಿನ ಕಿಟ್‍ಗಳನ್ನು ಸಾಕಷ್ಟು ಪ್ರಮಾಣದಲ್ಲಿ ವಿತರಿಸಲಾಗುತ್ತಿದೆ. ಇದಕ್ಕಾಗಿಯೇ ನೀರಿನ ಲಭ್ಯತೆ ಇರುವ ಪ್ರದೇಶದಲ್ಲಿ ಅಗತ್ಯವಿರುವ ಪ್ರಮಾಣದಲ್ಲಿ ಮೇವಿನ ಬೀಜ ಒದಗಿಸಲಾಗುವುದು. ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಮನೆ ಹಾನಿಯಂತಹ ಸಮಸ್ಯೆ ಉಂಟಾದಾಗ ತುರ್ತಾಗಿ ಪರಿಹಾರ ನೀಡಲಾಗುತ್ತಿದೆ. ಸಂಕಷ್ಟಕ್ಕೊಳಗಾದ ಜನತೆಗೆ ನೆರವಾಗುತ್ತಿದ್ದೆವೆ. ಈ ಹಿಂದೆ ಅನಾವೃಷ್ಠಿಯಿಂದ ಬೆಳೆ ನಾಶವಾಗಿದೆ. ಅತಿವೃಷ್ಠಿಯಿಂದಲೂ ಸಹ ಬೆಳೆ ಹಾನಿಗೀಡಾಗಿರುವುದು ಕಂಡು ಬಂದಿದೆ. ಕೇಂದ್ರ ಬರ ಅಧ್ಯಯನ ತಂಡ ಸಹ ನಾಳೆ ಇಲ್ಲವೆ ನಾಳಿದ್ದು ಭೇಟಿ ನೀಡುತ್ತಿದ್ದು, ಬರದ ವಾಸ್ತವ ಪರಿಸ್ಥಿತಿ ವೀಕ್ಷಣೆ ಮಾಡಲಿದೆ ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಗಮನ ನೀಡಲಿದ್ದೇವೆ. ಸ್ವಚ್ಚತೆಗೆ ಹೆಚ್ಚು ಆದ್ಯತೆ ಕೊಡಬೇಕು. ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜನರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಬೇಕು. ಇಂದಿನ ಸಭೆಯಲ್ಲಿ ಹಲವಾರು ಸಮಸ್ಯೆಗಳನ್ನು ಜನರು ನಮ್ಮ ಮುಂದೆ ಇಟ್ಟಿದ್ದಾರೆ. ಇವುಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು. ಹನೂರು ಪಟ್ಟಣದಲ್ಲಿ ಕುಡಿಯುವ ನೀರು ಇತರೆ ಮೂಲ ಸೌಕರ್ಯಗಳನ್ನು ಒದಗಿಸಲು ಸಭೆಯಲ್ಲಿ ಸಾರ್ವಜನಿಕರು ಮನವಿ ಮಾಡಿದ್ದಾರೆ. ಪಟ್ಟಣದಲ್ಲಿ ನೀರು ಪೋಲಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು. ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಕೇಳಿ ಬಂದಿದ್ದು, ಇಂತಹ ಕಡೆ ಕೊಳವೆಬಾವಿಗಳನ್ನು ರೀ ಡ್ರಿಲ್ ಮಾಡಿಸಿ ತೊಂದರೆ ನಿವಾರಿಸಬೇಕು. ಮೂರು ತಾಸಿಗೂ ಹೆಚ್ಚು ಕಾಲ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದೆ. ಪ್ರತಿಯೊಬ್ಬ ಅರ್ಜಿದಾರರೊಂದಿಗೂ ಮಾತನಾಡಿ ವಿವರವಾಗಿ ಅವರ ಸಮಸ್ಯೆಗಳನ್ನು ಆಲಿಸಿದೆ. ಪಡಿತರ ಚೀಟಿ, ಕುಡಿಯುವ ನೀರು, ಪಿಂಚಣಿ, ವಿಧವಾ ವೇತನ, ಸ್ಮಶಾನಕ್ಕೆ ಜಾಗ, ಕಾಡುಪ್ರಾಣಿಗಳ ಹಾವಳಿ, ನಿವೇಶನ, ಕೆ.ಎಸ್.ಆರ್.ಟಿಸಿ ಬಸ್ಸುಗಳ ನಿಲುಗಡೆ, ಇ-ಸ್ವತ್ತು, ಖಾತೆ ಬದಲಾವಣೆ, ಸೇರಿದಂತೆ ಹಲವು ವಿಷಯಗಳ ಬಗ್ಗೆ ಜನರು ಸಚಿವರ ಮುಂದೆ ಅರ್ಜಿ ಸಲ್ಲಿಸಿ ಮನವಿ ಮಾಡಿದರು. ಹಲವು ವೈಯಕ್ತಿಕ ಸಮಸ್ಯೆ, ಸಾರ್ವಜನಿಕರ ಸ್ವತ್ತು ಸಂರಕ್ಷಣೆ ಮಾಡುವ ಬಗ್ಗೆಯೂ ಜನರು ಸಭೆಯಲ್ಲಿ ನನ್ನ ಗಮನಕ್ಕೆ ತಂದರು. ಇದೇ ವೇಳೆ ಮಳೆಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಿಸಿ, ಸಾಂಕೇತಿಕವಾಗಿ ಮೇವಿನ ಕಿಟ್ ಗಳನ್ನು ರೈತರಿಗೆ ವಿತರಿಸಿದೆ. ಕಾರ್ಯಕ್ರಮದಲ್ಲಿ ಹನೂರು ಕ್ಷೇತ್ರದ ಶಾಸಕರಾದ ಮಂಜುನಾಥ್,ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ರಾಚಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷರಾದ ಸಿದ್ದರಾಜು, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್, ಶಶಿಧರ್, ಪ್ರಭಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರಾಜ್ , ತಹಶೀಲ್ದಾರ್ ಚೈತ್ರ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
97
ಚಾಮರಾಜನಗರ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಮುಖ್ಯದ್ವಾರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಹೆಬ್ಬಾಗಿಲು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ನಂತರ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿದೆ. ಈ ಸಂದರ್ಭದಲ್ಲಿ ಮುಖಂಡರಾದ ಮಹೇಶ್ ಕುದರ್, ಕೆಲ್ಲಂಬಳ್ಳಿ ಸೋಮಶೇಖರ್, ಇಂಜಿನಿಯರ್ ಲತಾ ಸೇರಿದಂತೆ ಗ್ರಾಮದ ಮುಖಂಡರು, ಯಜಮಾನರು, ಗ್ರಾಮಸ್ಥರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
58
ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಯೋಜನೆಯಡಿ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಮಾಜಿ ಸಚಿವರಾದ ಎಚ್.ಸಿ.ಮಹದೇವಪ್ಪ ಅವರೊಂದಿಗೆ ಗುದ್ದಲಿಪೂಜೆ ನೆರವೇರಿಸಿದೆ. ಅಂಬೇಡ್ಕರ್ ಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನ ನೀಡಲಾಗಿದೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಮುದಾಯ ಭವನಗಳ ಕಾಮಗಾರಿಗಳು ನಿರ್ಮಾಣ ಹಂತದಲ್ಲಿದ್ದು, ಅವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಗಂಗಾ ಕಲ್ಯಾಣ, ವಸತಿ ಸಾಲ ಸೇರಿದಂತೆ ಹಲವು ಯೋಜನೆಗಳ ಸೌಲಭ್ಯಗಳನ್ನು ಒದಗಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದೆ. ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಗಾಂಧಿ ಜಯಂತಿಯ ದಿನದಂದು ಅಂಬೇಡ್ಕರ್ ಭವನದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿರುವುದು ಸಂತಸ ತಂದಿದೆ. ಚಾಮರಾಜನಗರ ಜಿಲ್ಲೆ ಅಭಿವೃದ್ಧಿಯತ್ತ ಸಾಗುತ್ತಿದೆ. ತಾವು ಸಚಿವರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ಗ್ರಾಮದ ಜನರು ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದಾಗ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಮಹದೇವಪ್ಪ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್, ಮುಖಂಡರಾದ ಲಿಂಗಣ್ಣ, ನಾಗರಾಜುಮೂರ್ತಿ, ಶಿವಕುಮಾರಸ್ವಾಮಿ, ಎಂ.ಎಸ್.ಮಾದಯ್ಯ, ಎಸ್.ಪಿ.ಕೆ.ಉಮೇಶ್, ಮಹೇಶ್ ಕುದರ್, ಚಿಕ್ಕ ಮಹದೇವ್, ಕಾವೇರಿ ಶಿವಕುಮಾರ್, ಅಶೋಕ್, ಚಿನ್ನಮ್ಮ, ನಾಗರತ್ನ, ಮರಿಯಾಲ ಹುಂಡಿ ಕುಮಾರ್, ದುಂಡು ಮಾದಯ್ಯ, ಬಸುಮರಿ ಸೇರಿದಂತೆ ಗ್ರಾಮದ ಮುಖಂಡರು, ಯಜಮಾನರು ಗ್ರಾಮಸ್ಥರು ಇದ್ದರು
59
ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ 2 ಕೋಟಿ ರೂ.ವೆಚ್ಚದ ಸೇತುವೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮಸ್ಥರ ಮನವಿಯಂತೆ ಗ್ರಾಮದಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ 2 ಕೋಟಿ ಸೇತುವೆ ನಿರ್ಮಾಣಕ್ಕೆ ಮಂಜೂರಾಗಿದ್ದು, ಇಂದು ಗುದ್ದಲಿಪೂಜೆ ಮಾಡಲಾಗಿದೆ. ಒಂದು ಉತ್ತಮ ಸೇತುವೆ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ನಲ್ಲೂರು ಸೋಮೇಶ್ವರ, ಕನಿಷ್ಟ ವೇತನಾ ಸಲಹಾ ಸಮಿತಿ ಮಾಜಿ ಅಧ್ಯಕ್ಷ ,ತಾ.ಪಂ.ಮಾಜಿ ಅಧ್ಯಕ್ಷ ಚಿಕ್ಕಮಹದೇವು, ಎಇಇ ಶಾಂತಮ್ಮ, ಮುಖಂಡರಾದ ನಾಗಯ್ಯ, ಶಿವಕುಮಾರ್, ಕಮಲ್ ಖಾನ್, ಕೋಡಿಮೋಳೆ ಪ್ರಕಾಶ್,ರಂಗಸ್ವಾಮಿ, .ಮುದ್ದಮಲ್ಲಯ್ಯ, ಎನ್.ಜಿ.ಬಸವರಾಜು ಹಾಜರಿದ್ದರು.
49
ಚಾಮರಾಜನಗರ ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಕುಳ್ಳೂರು ಗ್ರಾಮದಿಂದ ಬೂದಿಪಡಗಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಮಧ್ಯೆ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದೆ ರಾಷ್ಟ್ರೀಯ ಹೆದ್ದಾರಿಯಿಂದ ಬೂದಿಪಡಗ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿರುವ ಸೇತುವೆ ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಗ್ರಾಮಸ್ಥರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೊಸ ಸೇತುವೆ ನಿರ್ಮಾಣದಿಂದ ಬೂದಿಪಡಗ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ಮಣಿನಾಯಕ್, ತಾ.ಪಂ ಮಾಜಿ ಸದಸ್ಯ ಪಿ.ಕುಮಾರ್ ನಾಯಕ್, ಮಾಜಿ ಗ್ರಾ.ಪಂ.ಅಧ್ಯಕ್ಷೆ ಶಾಂತಮ್ಮ, ಮಾಜಿ ಉಪಾಧ್ಯಕ್ಷ ಶಿವನಾಯಕ, ಮುಖಂಡರಾದ ಬಾಲು ನಾಯಕ, ಉಲ್ಲಾಶ್, ನಾಯಕ್, ಸಣ್ಣಾಕ್ಕಿಗೌಡ, ಶಂಕರ್, ಬಾಬು, ಶಿವಣ್ಣ, ಮಹದೇವನಾಯಕ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
49
ಚಾಮರಾಜನಗರದ ಹೊರವಲಯದಲ್ಲಿರುವ ಯಡಬೆಟ್ಟದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಬಳಿ ಇರುವ ಗಾಂಧಿ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ 157ನೇ ಜನ್ಮ ದಿನಾಚರಣೆ’ ಕಾರ್ಯಕ್ರಮದಲ್ಲಿ ಗಾಂಧಿಜೀ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದೆ. ಭಾರತದ ರಾಷ್ಟ್ರೀಯ ಹಬ್ಬಗಳಲ್ಲಿ ಗಾಂಧಿ ಜಯಂತಿಯು ಒಂದಾಗಿದ್ದು, ವಿಶ್ವಸಂಸ್ಥೆಯು ಗಾಂಧಿಜೀಯವರ ಜನ್ಮದಿನವನ್ನು ಅಹಿಂಸಾ ದಿನವೆಂದು ಘೋಷಿಸಿದೆ. 1869ರಲ್ಲಿ ಗುಜರಾತ್‍ನ ಪೋರಬಂದರಿನಲ್ಲಿ ಜನಿಸಿದ ಗಾಂಧಿಜೀಯವರು ಭಾರತ ಸ್ವಾತಂತ್ರ್ಯ ಹೋರಾಟದ ನೇತೃತ್ವದಲ್ಲಿ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಅಸಹಕಾರ ಚಳವಳಿ, ಸತ್ಯಾಗ್ರಹಗಳಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದರು. ಸತ್ಯ, ಅಹಿಂಸೆ, ಸರಳತೆ, ಸೇವಾಮನೋಭಾವ, ತ್ಯಾಗದ ಮೂಲಕ ದೇಶಭಕ್ತಿಯನ್ನು ಜನರಲ್ಲಿ ಬಿತ್ತಿ ಜನಸಾಮಾನ್ಯರನ್ನು ಸ್ವಾತಂತ್ರ್ಯಕ್ಕಾಗಿ ಜಾಗೃತಗೊಳಿಸಿದರು. ಗಾಂಧಿ ವ್ಯಕ್ತಿಯಲ್ಲ, ಅದೊಂದು ವಿಶೇಷ ಆಕರ್ಷಣೆಯ ಶಕ್ತಿ. ‘ನನ್ನ ಜೀವನವೇ ನನ್ನ ಸಂದೇಶ’ ಘೊಷಣೆಯ ಮೂಲಕ ತಮ್ಮ ಅರ್ಥಪೂರ್ಣ ಬದುಕಿನ ಮೌಲ್ಯಗಳನ್ನು ಸಾರಿದರು. ಗಾಂಧಿಜೀ ಸ್ವಚ್ಚತೆಯ ಮಹತ್ವವನ್ನು ಅಂದಿನ ದಿನಗಳಲ್ಲೇ ತಿಳಿಹೇಳಿದ್ದರು. ದೇಶದ ಅಭಿವೃದ್ಧಿಗಾಗಿ ಮೊದಲು ಗ್ರಾಮಗಳನ್ನು ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಯಾಗಬೇಕು. ಗ್ರಾಮೀಣ ಜನರ ಅರ್ಥಿಕ ಸದೃಢತೆಯನ್ನು ಗಾಂಧಿಜೀ ಪ್ರತಿಪಾದಿಸಿದ್ದರು. ಎಲ್ಲರು ಗಾಂಧಿಜೀಯವರ ಗ್ರಾಮಸ್ವರಾಜ್ಯದ ಕನಸನ್ನು ಈಡೇರಿಸಲು ಮುಂದಾಗಬೇಕಿದೆ. ನಂಜನಗೂಡಿನ ಬದನವಾಳು ಗ್ರಾಮದ ಖಾದಿ ಕೇಂದ್ರಕ್ಕೆ ಭೇಟಿ ನೀಡಿದ್ದ ಗಾಂಧಿಜೀಯವರು ಗ್ರಾಮೀಣ ಜನರನ್ನು ಗುಡಿಕೈಗಾರಿಕೆಗೆ ಪ್ರೋತ್ಸಾಹಿಸಿದ್ದರು. ಬ್ರಿಟಿಷರ ವಸ್ತುಗಳ ವ್ಯಾಪಾರ ವಿರುದ್ಧ ಸ್ವದೇಶಿ ಚಳವಳಿಗೆ ಜನರನ್ನು ಪ್ರೇರೇಪಿಸಿ ಹುರಿದುಂಬಿಸಿದರು. ಭಾರತೀಯರ ಹೃದಯದಲ್ಲಿ ಚಿರಸ್ಮರಣೀಯರಾಗಿರುವ ಗಾಂಧಿಜೀಯವರ ಸರಳತೆ, ಚಿಂತನೆ, ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ. ಇದೇ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಮುದ್ರಿಸಲಾಗಿರುವ ಜನಪದ, ಮಾರ್ಚ್ ಆಫ್ ಕರ್ನಾಟಕ ವಿಶೇಷ ಸಂಚಿಕೆಗಳನ್ನು ಬಿಡುಗಡೆಗೊಳಿಸಿದೆ. ವೇದಿಕೆಯಲ್ಲಿ ಗಾಂಧಿ ವೇಷಧಾರಿ ಪುಟ್ಟ ಮಕ್ಕಳು ಚರಕ ತಿರುಗಿಸಿ ವೇದಿಕೆಯಲ್ಲಿ ಗಮನ ಸೆಳೆದರು. ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ, ಪದವಿಪೂರ್ವ ಶಿಕ್ಷಣ ಹಾಗೂ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜೇತರಾದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಎನ್. ಶಶಿಧರ್, ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಸುಬ್ರಮಣ್ಯ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ದೇವಕಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಿರಿಧರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರಾದ ಜಯರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಮೇಶ್, ವಾರ್ತಾ ಸಹಾಯಕರಾದ ಸುರೇಶ್‍ಕುಮಾರ್, ವಿಷಯ ನಿರ್ವಾಹಕರಾದ ಗಣೇಶ್, ಜನಪದ ಗಾಯಕರಾದ ಸಿ.ಎಂ. ನರಸಿಂಹಮೂರ್ತಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
1
61
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಎಂ.ಜಿ.ಎಸ್.ವಿ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಾಮರಾಜನಗರ ಜಿಲ್ಲೆ, ಚಾಮರಾಜನಗರ ವತಿಯಿಂದ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಮತ್ತು ಸಚಿವರು ಹಾಗೂ ಶಾಸಕರುಗಳ ಜೊತೆ ಭಾಗವಹಿಸಿದೆ. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರಾದ ಶ್ರೀ ಚೆಲುವರಾಯಸ್ವಾಮಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಕ್ಸ್ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಶ್ರೀ ಅಜಯ್ ಸಿಂಗ್, ಹಾಗು ಚಾಮರಾಜನಗರ ಲೋಕಸಭಾ ಸಂಸದರಾದ ಸುನೀಲ್ ಬೋಸ್, ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಹನೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಶ್ರೀ ಎಂ.ಆರ್. ಮಂಜುನಾಥ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶ್ರೀ ಹೆಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಾ|| ಡಿ. ತಿಮ್ಮಯ್ಯ ,ಮಾಜಿ ಶಾಸಕರಾದ ಶ್ರೀ ಜಿ.ಎನ್ ನಂಜುಂಡಸ್ವಾಮಿ, ಆರ್ ನರೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಸಿ, ನರೇಂದ್ರ, ಕಾಡಾ ಅಧ್ಯಕ್ಷರಾದ ಶ್ರೀ ಪಿ. ಮರಿಸ್ವಾಮಿ, ಶ್ರೀ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಹೆಚ್.ವಿ. ಚಂದ್ರು, ಚಾಮುಲ್ ಅಧ್ಯಕ್ಷ ಶ್ರೀ ನಂಜುಂಡಸ್ವಾಮಿ ರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಜಿ ಯೋಗೇಶ್ ಅವರು, ಜಿಲ್ಲಾಧಿಕಾರಿಗಳಾದ ರೂಪ ಅವರು, ಹಾಗು ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಪಕ್ಷದ ನಾಯಕರು, ಕಾರ್ಯಕರ್ತರು, ಸ್ಥಳೀಯ ಮುಖಂಡರು ಹಾಜರಿದ್ದರು.
84
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc)ಯ ಎ.ವಿ. ರಾಮರಾವ್ ಸಭಾಂಗಣದಲ್ಲಿ ವಿಶ್ವ ರೇಬಿಸ್‌ ದಿನಾಚರಣೆ–2026ರ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದೆ. ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ, ಭಾರತೀಯ ವಿಜ್ಞಾನ ಸಂಸ್ಥೆ (IISc), BEST ಕ್ಲಸ್ಟರ್, KVAFSU ಹಾಗೂ ಮಿಷನ್ ರೇಬಿಸ್‌ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. “ರೇಬಿಸ್‌ ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು, ಒಮ್ಮೆ ರೋಗದ ಲಕ್ಷಣಗಳು ಕಾಣಿಸಿಕೊಂಡ ನಂತರ ಬದುಕುಳಿಯುವ ಸಾಧ್ಯತೆ ಅತ್ಯಂತ ಕಡಿಮೆ. ಆದ್ದರಿಂದ ಮುನ್ನೆಚ್ಚರಿಕೆ, ಸಮಯೋಚಿತ ಲಸಿಕೆ ಹಾಗೂ ಪ್ರಾಣಿಗಳ ಕಡಿತದ ಕುರಿತು ಜಾಗೃತಿ ಅತ್ಯಂತ ಮುಖ್ಯವಾಗಿದೆ,”. ನಾಯಿಗಳೊಂದಿಗೆ ಸಂಪರ್ಕಕ್ಕೆ ಬರುವ ಸಾಧ್ಯತೆ ಹೆಚ್ಚಿರುವ ಮಕ್ಕಳನ್ನು ರಕ್ಷಿಸುವ ಅಗತ್ಯವಿದ್ದು, ಶೈಕ್ಷಣಿಕ ಸಂಸ್ಥೆಗಳಲ್ಲಿ ಇಲಾಖೆಯು ಜಾಗೃತಿ ಅಭಿಯಾನವನ್ನು ಗಣನೀಯವಾಗಿ ವಿಸ್ತರಿಸಿದೆ. 2024-25ನೇ ಸಾಲಿನಲ್ಲಿ 5,541 ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, 6,62,183 ನಾಯಿಗಳಿಗೆ ಲಸಿಕೆ ನೀಡಲಾಗಿತ್ತು. 2025-26ನೇ ಸಾಲಿನಲ್ಲಿ ಅಭಿಯಾನವು 9,175 ಶಾಲೆಗಳನ್ನು ತಲುಪಿದ್ದು, 9,51,593 ನಾಯಿಗಳಿಗೆ ಲಸಿಕೆ ನೀಡಲಾಗಿದೆ. ಪ್ರಸ್ತುತ 2026-27ನೇ ಸಾಲಿನಲ್ಲಿ ಈಗಾಗಲೇ 7,200 ಶಾಲಾ-ಕಾಲೇಜುಗಳಲ್ಲಿ ರೇಬಿಸ್‌ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಸುಮಾರು 5 ಲಕ್ಷ ವಿದ್ಯಾರ್ಥಿಗಳು ಹಾಗೂ 32,000 ಶಿಕ್ಷಕರನ್ನು ತಲುಪಲಾಗಿದೆ. ಪಶುಸಂಗೋಪನಾ ಇಲಾಖೆಯ ಸುಮಾರು 2,500 ಮುಂಚೂಣಿ ಸಿಬ್ಬಂದಿ ಲಸಿಕಾ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಗುರಿಯಾಗಿರುವ ಲಸಿಕೆಗಳ ಪೈಕಿ WVS ಮತ್ತು Rabies and Care ಸಂಸ್ಥೆಗಳು 1 ಲಕ್ಷ ಡೋಸ್‌ಗಳನ್ನು ಉಚಿತವಾಗಿ ಒದಗಿಸುತ್ತಿವೆ. ಉಳಿದ 10 ಲಕ್ಷ ಡೋಸ್‌ಗಳನ್ನು ASCAD ಕಾರ್ಯಕ್ರಮದಡಿ ಇಲಾಖೆಯು ವ್ಯವಸ್ಥೆ ಮಾಡಿದೆ. ಒನ್ ಹೆಲ್ತ್‌ (One Health) ವಿಧಾನದಲ್ಲಿ ಪ್ರಾಣಿಗಳ ಆರೋಗ್ಯ, ಮಾನವ ಆರೋಗ್ಯ ಹಾಗೂ ಪರಿಸರ ಆರೋಗ್ಯವನ್ನು ಒಗ್ಗೂಡಿಸಿ ಕಾರ್ಯನಿರ್ವಹಿಸುತ್ತಿದ್ದೇವೆ. 2030ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣವಾಗಿ ರೇಬಿಸ್‌ ಮುಕ್ತ ರಾಜ್ಯವನ್ನಾಗಿಸುವುದು ನಮ್ಮ ಗುರಿಯಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು IIScನ ಜೈವರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಉತ್ಕಲ್ ಎಸ್. ಟಾಟು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ವಿನೋದ್ ಪ್ರಿಯಾ ಆರ್., IAS, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಆಯುಕ್ತರಾದ ಶ್ರೀ ಲಿಂಗರಾಜ್ ಎಸ್.ಎಸ್., IFS; KVAFSUನ ಕುಲಪತಿಗಳಾದ ಪ್ರೊ. ಕೆ.ಸಿ. ವೀರಣ್ಣ; ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ನಿರ್ದೇಶಕರಾದ ಡಾ. ಪಿ. ಶ್ರೀನಿವಾಸು; ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಾದೇಶಿಕ ಅಧಿಕಾರಿ ಶ್ರೀ ಯಶವಂತ್ ಶೆಣೈ, IIS; ಪಶುವೈದ್ಯಕೀಯ ಕಾಲೇಜಿನ ಡೀನ್ ಪ್ರೊ. ಆರ್. ನಾಗರಾಜ್; Indian Immunologicals Limitedನ ಹಿರಿಯ ಉಪಾಧ್ಯಕ್ಷರಾದ ಡಾ. ಎನ್.ಎಸ್.ಎನ್. ಭಾರ್ಗವ; KIMSನ ಸಮುದಾಯ ವೈದ್ಯಕೀಯ ವಿಭಾಗದ ಪ್ರೊ. ಡಿ.ಎಚ್. ಅಶ್ವತ್ಥನಾರಾಯಣ; ಹಾಗೂ CARE ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಸುಧಾ ನಾರಾಯಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
60
ಇಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮರಾಜನಗರ ತಾಲೂಕು ವ್ಯಾಪ್ತಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ನೀಡಲಾಗುವ 2024-25ಸಾಲಿಗೆ ಸಂಬಂಧಿಸಿದಂತೆ ಇಬ್ಬರು ಹಾಗೂ 2025-26ನೇ ಸಾಲಿನ 31 ಮಂದಿ ಸೇರಿದಂತೆ ಒಟ್ಟು 33 ಮಂದಿ ಫಲಾನುಭವಿಗಳಿಗೆ 1 ಕೋಟಿಗೂ ಅಧಿಕ ವೆಚ್ಚದ ಬೋರ್‍ವೆಲ್ ಪರಿಕರಗಳನ್ನು ವಿತರಿಸಿದೆ. ಇದೇ ವೇಳೆ ಮಾತನಾಡಿ, ರಾಜ್ಯದಲ್ಲಿ ಬರ ಆವರಿಸಿದ್ದು, ಜಿಲ್ಲೆಯ ಐದು ತಾಲೂಕುಗಳನ್ನು ಸರ್ಕಾರ ತೀವ್ರ ಬರಪೀಡಿತ ತಾಲೂಕುಗಳಾಗಿ ಘೋಷಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಸರ್ಕಾರದ ಮಟ್ಟದಲ್ಲಿ ಟೆಂಡರ್ ಕರೆದು ತಾಲೂಕು ವ್ಯಾಪ್ತಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗಿದೆ. ರೈತರಿಗೆ ಇದು ಅನುಕೂಲವಾಗಲಿದೆ. ರೈತರು ಇಂದು ಮಳೆ ನಂಬಿ ಬೆಳೆ ಬೆಳೆಯುವ ಪರಿಸ್ಥಿತಿಯಲ್ಲಿಲ್ಲ. ಹನಿ ನೀರಾವರಿ ಹಾಗೂ ತುಂತುರು ಹನಿ ನೀರಾವರಿ ವ್ಯವಸ್ಥೆಯನ್ನು ಅವಲಂಬಿಸಬೇಕಿದೆ. ಸರ್ಕಾರವು ರೈತರ ಪರವಾಗಿದೆ. ರೈತರ ಕಲ್ಯಾಣಕ್ಕಾಗಿ ವಿವಿಧ ನಿಗಮಗಳಿಂದ ಅಗತ್ಯ ಸೌಲಭ್ಯ, ಸವಲತ್ತು ನೀಡಲಾಗುತ್ತಿದೆ. ಆಯ್ಕೆಯಾಗಿರುವ ಫಲಾನುಭವಿಗಳಿಗೆ ತಲಾ 3,75,000 ರೂ. ವೆಚ್ಚದಲ್ಲಿ ಸವಲತ್ತು ವಿತರಣೆ ಮಾಡಲಾಗಿದೆ. ರೈತರು ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ.ಎಸ್. ರಾಜು, ಇತರರು ಇದೇ ಸಂದರ್ಭದಲ್ಲಿ ಇದ್ದರು.
🤖 Made with AI
63
ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಚಾಮರಾಜನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬ ಮಾಡದೇ ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ವಿಶೇಷವಾಗಿ ಅರಣ್ಯ ಭಾಗಗಳಲ್ಲಿ ವಾಸಿಸುತ್ತಿರುವ ಜನರಿಗಾಗಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿ ಮಾಡಬಾರದು ಎಂದು ಸೂಚನೆ ನೀಡಿದೆ. ಕುಡಿಯುವ ನೀರಿನ ಕಾಮಗಾರಿಗಳನ್ನು ವೇಗವಾಗಿ ಮುಗಿಸಿ ಜನರಿಗೆ ನೀರು ಒದಗಿಸುವುದು ಆದ್ಯತೆಯಾಗಿದೆ. ಅರಣ್ಯ ಭಾಗದ ಜನರಿಗೆ ಕುಡಿಯುವ ನೀರಿಗಾಗಿ ಈಗಾಗಲೇ ಜಾರಿಗೊಳಿಸಲಾಗುತ್ತಿರುವ ಯೋಜನೆಗಳಿಗೆ ಅಡಚಣೆ ಮಾಡಬಾರದು. ಪೋಡುಗಳಲ್ಲಿ ಕುಡಿಯುವ ನೀರು ಪೂರೈಸಲು ಅವಕಾಶ ಮಾಡಿಕೊಡಬೇಕು. ವಿಳಂಬ ಧೋರಣೆ ಅನುಸರಿಸಬಾರದು ಎಂದು ತಿಳಿಸಿದೆ. ಜಲಜೀವನ್ ಮಿಷನ್ ಯೋಜನೆಯಡಿ ಇನ್ನೂ ಎಷ್ಟು ಭಾಗಗಳಲ್ಲಿ ಕಾಮಗಾರಿ ಅಪೂರ್ಣವಾಗಿದೆ. ಇದುವರೆಗೆ ಎಷ್ಟು ಕಾಮಗಾರಿ ನಿರ್ವಹಿಸಿ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದೆ ಎಂಬುದರ ಕುರಿತು ಸಮಗ್ರ ವರದಿಯನ್ನು ಸಲ್ಲಿಸಬೇಕು. ಜಿಲ್ಲೆಯಲ್ಲಿ ಬರ ಇರುವುದರಿಂದ ಕುಡಿಯುವ ನೀರಿನ ಪೂರೈಕೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ನೀರು ಒದಗಿಸುವುದು ಅತ್ಯಂತ ತುರ್ತು ಕೆಲಸವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ. ಮೇವು ಲಭ್ಯತೆ ಬಗ್ಗೆ ಪರಿಶೀಲಿಸಿ ಈಗಾಗಲೇ ಮೇವು ಬೆಳೆಯಲು ಮೇವಿನ ಕಿಟ್ ಗಳನ್ನು ನೀಡಲಾಗುತ್ತಿದೆ. ನೀರು ಲಭ್ಯತೆ ಇರುವ ಕಡೆ ಮೇವಿನ ಕಿಟ್‍ಗಳನ್ನು ಹೆಚ್ಚು ನೀಡಿ ಮೇವು ಬೆಳೆಸಲು ಉತ್ತೇಜಿಸಬೇಕು. ಎಲ್ಲಿ ಮೇವಿಗೆ ಅಭಾವ ಇದೆಯೋ ಅಂತಹ ಕಡೆ ಮೇವಿನ ಕಿಟ್‍ಗಳನ್ನು ವಿತರಣೆಗೆ ಕೂಡಲೇ ಮುಂದಾಗಬೇಕು. ಹೆಚ್ಚಿನ ಪ್ರಮಾಣದಲ್ಲಿ ಅಗತ್ಯವಿರುವ ಮೇವಿನ ಕಿಟ್‍ಗಳನ್ನು ಒದಗಿಸಲಾಗುವುದು. ಕೃಷಿ, ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿ ಪಡೆದು ನೀರಿಲ್ಲದೆ ಅರಿಶಿಣ, ಆಲೂಗಡ್ಡೆ, ಬೆಳ್ಳುಳ್ಳಿ ಸೇರಿದಂತೆ ಇನ್ನಿತರ ಬೆಳೆಗಳು ನಷ್ಟವಾಗಿವೆ. ಅಧಿಕಾರಿಗಳು ನೀಡುವ ವರದಿಯಲ್ಲಿ ನಷ್ಟವಾಗಿರುವ ಎಲ್ಲ ಬೆಳೆಗಳ ಮಾಹಿತಿ ನಿಖರವಾಗಿ ಇರುವಂತೆ ನಿಗಾ ವಹಿಸಬೇಕು. ಇಲಾಖೆ ಕಾರ್ಯಕ್ರಮಗಳು, ಯೋಜನೆಗಳನ್ನು ಅನುಷ್ಠಾನ ಮಾಡುವಾಗ ಜನರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದೆ. ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವುದು, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಗ್ರಾಮೀಣ ವಸತಿ ಯೋಜನೆ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ರೇಷ್ಮೆ ಇಲಾಖೆ, ಮೀನುಗಾರಿಗೆ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಆಹಾರ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ, ಪ್ರಾದೇಶಿಕ ಸಾರಿಗೆ ಇಲಾಖೆ, ಸಣ್ಣ ನೀರಾವರಿ, ಶಾಲಾ ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಸುಧೀರ್ಘವಾಗಿ ಪರಿಶೀಲಿಸಿದೆ. ಶಾಸಕರಾದ ಎ.ಆರ್. ಕೃಷ್ಣಮೂರ್ತಿ , ಎಂ.ಆರ್. ಮಂಜುನಾಥ್ , ಹೆಚ್.ಎಂ. ಗಣೇಶ್ ಪ್ರಸಾದ್ ,ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಕೆಡಿಪಿ ಸಮಿತಿ ಸದಸ್ಯರಾದ ಶಂಕರಪ್ಪ, ಭವ್ಯ ಮುನಿರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
53
ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಸವಣ್ಣ ಬಲಿಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದೇ ವೇಳೆ ಮೃತ ರೈತನ ಕುಟುಂಬಕ್ಕೆ ಸರ್ಕಾರದ ವತಿಯಿಂದ 5 ಲಕ್ಷ ಪರಿಹಾರದ ಚೆಕ್ ವಿತರಿಸಿದೆ. ಉಳಿದ 15 ಲಕ್ಷ ಪರಿಹಾರವನ್ನು ಸಹ ಕೊಡಿಸಲಾಗುವುದು. ಇಂದಿನ ಪರಿಸ್ಥಿತಿಯಲ್ಲಿ 20 ಲಕ್ಷ ಪರಿಹಾರವೂ ಸಾಕಾಗುವುದಿಲ್ಲ. ಮೃತ ರೈತನ ಕುಟುಂಬದ ಪರಿಸ್ಥಿತಿಯನ್ನು ಪರಿಗಣಿಸಿ ಪರಿಹಾರದ ಮೊತ್ತವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡುತ್ತೇನೆ. ರೈತನನ್ನು ಬಲಿತೆಗೆದುಕೊಂಡ ಹುಲಿಯನ್ನು ಸೆರೆಹಿಡಿಯಲು ಇಂದಿನಿಂದಲೇ ಸಾಕಾನೆಗಳನ್ನು ಹಾಗೂ ಅರವಳಿಕೆ ತಜ್ಞರನ್ನು ಕರೆಸಿ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುವುದು. ಮೃತ ರೈತನ ಪತ್ನಿಗೆ ಪ್ರತಿ ತಿಂಗಳು ೪ ಸಾವಿರ ಮಾಶಾಸನ ನೀಡುವ ವ್ಯವಸ್ಥೆ ಮಾಡಲಾಗುವುದು. ಮೃತ ರೈತನಿಗೆ ನಾಲ್ವರು ಮಕ್ಕಳಿದ್ದು, ಅವರಲ್ಲಿ ಒಬ್ಬರಿಗೆ ಪಶುಸಂಗೋಪನೆ ಇಲಾಖೆಯಲ್ಲಿ ಡಿ-ಗ್ರೂಪ್ ನೌಕರಿ ಹಾಗೂ ಮತ್ತೊಬ್ಬ ಮಗನಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿದೆ.
74
ಚಾಮರಾಜನಗರದ ಹೊರವಲಯದಲ್ಲಿ ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಉರ್ದು ಮಾಧ್ಯಮ ಮಹಿಳಾ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದೆ. ನಂತರ ಮಾತನಾಡಿ, ರಾಜ್ಯ ಸರ್ಕಾರ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬಾಲಕಿಯರ ಶಿಕ್ಷಣಕ್ಕೆ ಹೆಚ್ಚಿನ ಅನುಕೂಲವಾಗುವಂತೆ ನಗರದ ಹೊರವಲಯದಲ್ಲಿ ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿ, ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಕಟ್ಟಡ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು, ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದೆ. ಈ ಸಂದರ್ಭದಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಸರ್ ಮುನ್ನಿ, ನಗರಸಭಾ ನಾಮನಿರ್ದೇಶಿತ ಸದಸ್ಯ ಸ್ವಾಮಿ, ನಗರಸಭೆ ಮಾಜಿ ಉಪಾಧ್ಯಕ್ಷ ರಾಜಪ್ಪ, ಮಾಜಿ ಸದಸ್ಯ ಕಲೀಲ್ ಉಲ್ಲಾ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರೂಪೇಶ್, ನಂಮಾಜ್, ಪೃಥ್ವಿ, ಜಿ.ಡಿ. ಪ್ರಕಾಶ್, ಆಯೂಬ್ ಖಾನ್, ರವಿಗೌಡ, ಮಹೇಶ್, ರಮೇಶ್ ಹಾಗೂ ಮುಸ್ಲಿಂ ಧರ್ಮಗುರುಗಳು ಸೇರಿದಂತೆ ಇತರರು ಹಾಜರಿದ್ದರು.
1
160
ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು ನೀತಿ ನಿರೂಪಣೆ ರೂಪಿಸಲು ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಭಾಗಿಯಾಗಿ ಚರ್ಚಿಸಲಾಯಿತು. ಸಂದರ್ಭದಲ್ಲಿ ಸಂಪುಟ ಸಹೋದ್ಯೋಗಿಯಾದ ಲಕ್ಷ್ಮಣ ಸವದಿರವರು ಹಾಜರಿದ್ದರು.
86
ಚಾಮರಾಜನಗರ ತಾಲೂಕು ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದೆ. ಸರ್ಕಾರ ಜನತೆಯ ಸಮಸ್ಯೆಗಳನ್ನು ಮನೆ ಬಾಗಿಲಿನಲ್ಲಿಯೇ ಪರಿಹರಿಸುವ ಸದುದ್ದೇಶದಿಂದ ನೂತನವಾಗಿ ಪ್ರಜಾಸೇವೆ ಇಲಾಖೆ ಮೂಲಕ ಪ್ರಜಾಸೇವೆ ಆಂದೋಲನ ಸಭೆಯನ್ನು ರಾಜ್ಯದೆಲ್ಲೆಡೆ ನಡೆಸುತ್ತಿದೆ. ಜಿಲ್ಲೆಯಲ್ಲೂ ಇಂದಿನಿಂದಲೇ ಪ್ರತಿ ಶನಿವಾರ ಪ್ರಜಾಸೇವೆ ಸಭೆ ಆಯೋಜನೆ ಮಾಡಲಾಗುತ್ತಿದ್ದು, ಜನರು ನೇರವಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ತಮಗೆ ಯಾವ ಇಲಖೆಯಿಂದ ಸಮಸ್ಯೆಯಾಗಿದೆ? ಯಾವ ಸೌಲಭ್ಯಗಳು ಸಿಗಬೇಕಿದೆ ಎಂಬ ಬಗ್ಗೆ ಸಭೆಯಲ್ಲಿಯೇ ನೀಡಬಹುದು. ಸಭೆಯಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಲಾಗುತ್ತದೆ. ಇಲ್ಲಿ ಇತ್ಯರ್ಥವಾಗದ ಸಮಸ್ಯೆಗಳ ಅರ್ಜಿಗಳನ್ನು ಮುಂದಿನ ಹಂತದಲ್ಲಿ ಉನ್ನತ ಅಧಿಕಾರಿಗಳಿಗೆ ಕಳುಹಿಸಿ ಸ್ಪಂದನೆ ನೀಡಲಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಸಹ ಸಂಬಂಧಪಟ್ಟವರಿಗೆ ಕಳುಹಿಸಿ ಪರಿಹರಿಸಲಾಗುತ್ತದೆ. ಒಟ್ಟಾರೆ ಜನರ ಕುಂದು ಕೊರತೆಗಳಿಗೆ ಸರ್ಕಾರವೇ ಅವರ ಬಳಿ ಬಂದು ಇತ್ಯರ್ಥ ಮಾಡುವುದು ಪ್ರಜಾಸೇವೆ ಆಂದೋಲನ ಸಭೆಯ ಮುಖ್ಯ ಧ್ಯೇಯವಾಗಿದೆ. ಪ್ರತಿ ತಿಂಗಳ ಮೊದಲನೆ ಹಾಗೂ ಮೂರನೇ ಶನಿವಾರದಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತದೆ. ಎರಡನೇ ಹಾಗೂ ನಾಲ್ಕನೇ ಶನಿವಾರದಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಸಭೆ ಈಗಾಗಲೇ ನಿಗದಿಯಾಗಿದೆ. ಆಯಾ ಭಾಗದ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿಯೂ ಜನರು ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಲು ಪ್ರಜಾಸೇವೆ ಆಂದೋಲನದಡಿ ಅವಕಾಶ ಮಾಡಿಕೊಟ್ಟಿದೆ. ಸಾಕಷ್ಟು ಪೂರ್ವ ಸಿದ್ದತೆಯೊಂದಿಗೆ ಪ್ರಜಾಸೇವೆ ಸಭೆಯನ್ನು ಆಯೋಜಿಸಲಾಗಿದೆ. ಜನರ ಸಮಸ್ಯೆಗಳನ್ನು ಕೇಳಿ ಆರಂಭದಲ್ಲಿಯೇ ನೊಂದಾಯಿಸಿ ಅರ್ಜಿ ನೀಡಲಾಗುತ್ತಿದೆ. ಯಾವ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಎಂಬುದನ್ನು ಅರ್ಜಿಯಲ್ಲಿಯೇ ನಿಗದಿಪಡಿಸಿ ಸ್ವೀಕರಿಸಲಾಗುತ್ತಿದೆ. ಇದಕ್ಕಾಗಿಯೇ ಅಗತ್ಯವಿರುವಷ್ಟು ಕೌಂಟರ್‍ಗಳನ್ನು ತೆರೆಯಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಸಾರ್ವಜನಿಕರ ಸ್ಪಂದನೆಗಾಗಿ ಸರ್ಕಾರ ಪ್ರಜಾಸೇವೆ ಸೌಲಭ್ಯವನ್ನು ಜಾರಿಗೆ ತಂದಿದೆ. ಜನತೆ ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದೆ. ಸಭೆಯ ಆರಂಭಕ್ಕೂ ಮೊದಲು ತಾಲೂಕು ಪಂಚಾಯತ್ ಆವರಣದಲ್ಲಿ ಮಾಹಿತಿ ನೀಡುವ ಸರ್ಕಾರಿ ಇಲಾಖೆಗಳ ಮಳಿಗೆಗಳನ್ನು ಉದ್ಘಾಟಿಸಿದೆ. ಪ್ರಜಾಸೇವೆಗಾಗಿ ಮಾಡಲಾಗಿದ್ದ ಎಲ್ಲ ವ್ಯವಸ್ಥೆಗಳನ್ನು ವೀಕ್ಷಿಸಿದೆ. ಬಳಿಕ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು. ಸತತ ಆರು ತಾಸುಗಳ ಕಾಲ ಸರತಿ ಸಾಲಿನಲ್ಲಿ ಬಂದ ಪ್ರತಿಯೊಬ್ಬರಿಂದಲೂ ಅರ್ಜಿ ಪಡೆದು ಅಹವಾಲುಗಳನ್ನು ಆಲಿಸಿದೆ. ವಿವರವಾಗಿ ಪರಿಶೀಲಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆ ಇತ್ಯರ್ಥಕ್ಕೆ ಸೂಚಿಸಿದೆ. ಖಾತೆ ಬದಲಾವಣೆ, ಕುಡಿಯುವ ನೀರು, ಪಡಿತರ ಚೀಟಿ, ನಿವೇಶನ, ವಸತಿ, ಬ್ಯಾಂಕಿನಿಂದ ಸಾಲ ಸೌಲಭ್ಯ, ಪಿಂಚಣಿ, ಪಟ್ಟಣ ಗ್ರಾಮಗಳಿಗೆ ಆಗಬೇಕಿರುವ ಅಭಿವೃದ್ದಿ ಕಾಮಗಾರಿಗಳು, ರಸ್ತೆ, ಇನ್ನಿತರ ಮೂಲ ಸೌಲಭ್ಯಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು. ಪ್ರಜಾಸೇವೆ ಆಂದೋಲನದ ಚೊಚ್ಚಲ ಸಭೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಯಿತು. ತಾಲೂಕು ಪಂಚಾಯತ್ ಸಭಾಂಗಣ ಕಿಕ್ಕಿರಿದು ತುಂಬಿತ್ತು. ತಾಲೂಕು ಪಂಚಾಯತ್ ಆವರಣದಲ್ಲಿ ತೆರೆಯಲಾಗಿದ್ದ ಕೌಂಟರ್‍ಗಳಲ್ಲಿಯೂ ಸಹ ನಿರೀಕ್ಷೆಗೂ ಮೀರಿ ಜನರು ನೊಂದಾಯಿಸುತ್ತಿದ್ದು ಕಂಡುಬಂತು. ಸಂಜೆ 4 ಗಂಟೆಯವರೆಗೂ ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ತಹಶೀಲ್ದಾರ್ ಗಿರಿಜಾ, ಇತರರು ಸಭೆಯಲ್ಲಿ ಇದ್ದರು.
1
114
ನಾಡಿನ ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಭಾರತದ ಶ್ರೇಷ್ಠ ತತ್ವಜ್ಞಾನಿ, ಶಿಕ್ಷಣತಜ್ಞ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಜ್ಞಾನವೆಂಬ ಬೆಳಕನ್ನು ನೀಡಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರತಿಯೊಬ್ಬ ಶಿಕ್ಷಕರಿಗೂ ಈ ಶುಭ ಸಂದರ್ಭದಲ್ಲಿ ಹೃತ್ಪೂರ್ವಕ ನಮನಗಳು.
1
99
ಪ್ರಜಾ ಸೇವೆ — ಜನರ ಬಳಿಗೆ ಸರ್ಕಾರ ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ತ್ವರಿತವಾಗಿ ಹಾಗೂ ಕಾಲಮಿತಿಯೊಳಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರದ ನೂತನ ‘ಪ್ರಜಾ ಸೇವೆ’ ಆಂದೋಲನ ಸಭೆಯನ್ನು ಚಾಮರಾಜನಗರದಲ್ಲಿ ಆಯೋಜಿಸಲಾಗಿದೆ. ದಿನಾಂಕಃ- ಸೆಪ್ಟೆಂಬರ್ 5, ಸಮಯಃ- ಬೆಳಿಗ್ಗೆ 10:30 ರಿಂದ ಸ್ಥಳಃ- ತಾಲ್ಲೂಕು ಪಂಚಾಯಿತಿ ಸಭಾಂಗಣ, ಚಾಮರಾಜನಗರ. ಜನರ ಸಮಸ್ಯೆಗಳಿಗೆ ಸ್ಪಂದನೆ — ಜನಪರ ಆಡಳಿತಕ್ಕೆ ಬದ್ಧತೆ. #PrajaSeva #KarnatakaGovernment #Janaseva
72
ಶ್ರೀಕೃಷ್ಣನ ಜನ್ಮದಿನವಾದ ಈ ಪವಿತ್ರ ಸಂದರ್ಭದಲ್ಲಿ, ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹೃತ್ಪೂರ್ವಕ ಶುಭಾಶಯಗಳು. ಭಗವಾನ್ ಶ್ರೀಕೃಷ್ಣನ ಕೃಪೆಯಿಂದ ಪ್ರತಿಯೊಬ್ಬರ ಜೀವನದಲ್ಲಿ ಸುಖ, ಶಾಂತಿ, ಸಮೃದ್ಧಿ ಮತ್ತು ಸಂತೋಷ ನೆಲೆಸಲಿ.
69
ಚಾಮರಾಜನಗರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆಗೆ ಆಗಮಿಸಿದ ಮಾನ್ಯ ಉಪಮುಖ್ಯಮಂತ್ರಿಗಳಾದ @DrParameshwara ಅವರೊಂದಿಗೆ ಇಂದು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಆವರಣದಲ್ಲಿರುವ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರ ಅವರ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದೆ. ಸಂದರ್ಭದಲ್ಲಿ ಗುಂಡ್ಲುಪೇಟೆ ಶಾಸಕರಾದ ಗಣೇಶ್ ಪ್ರಸಾದ್, ನಂಜನಗೂಡು ಶಾಸಕರಾದ ದರ್ಶನ್ ಧ್ರುವನಾರಾಯಣ್, ಕಾಡಾ ಅಧ್ಯಕ್ಷರಾದ ಮರಿಸ್ವಾಮಿ,ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಜೊತೆಯಲ್ಲಿದ್ದರು.
2
106